Thursday, April 13, 2017

ಎಲ್ಲಾದರೂ ಇರು ಎಂತಾದರು ಇರು / Ellaadaru iru Entaadaru iru

ಸಾಹಿತ್ಯ    : ರಾಷ್ಟ್ರಕವಿ ಕುವೆಂಪು   
ಗಾಯಕರು: ಡಾ. ರಾಜ್ ಕುಮಾರ್
ಸಂಗೀತ ಸಂಯೋಜನೆ : ಸಿ.ಅಶ್ವಥ್ 

ಎಲ್ಲಾದರೂ ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು 
ಕನ್ನಡವೇ ಸತ್ಯ ಕನ್ನಡವೇ ನಿತ್ಯ 
ಕನ್ನಡ ಗೋವಿನ ಓ ಮುದ್ದಿನ ಕರು
ಕನ್ನಡತನವೊಂದಿದ್ದರೆ ನೀ ಅಮ್ಮಗೆ ಕಲ್ಪತರು
ಕನ್ನಡವೇ ಸತ್ಯ ಕನ್ನಡವೇ ನಿತ್ಯ

ನೀ ಮೆಟ್ಟುವ ನೆಲ ಅದೇ ಕರ್ನಾಟಕ,  ನೀನೇರುವ ಮಲೆ ಸಹ್ಯಾದ್ರಿ
ನೀ ಮೆಟ್ಟುವ ನೆಲ ಅದೇ ಕರ್ನಾಟಕ,  ನೀನೇರುವ ಮಲೆ ಸಹ್ಯಾದ್ರಿ
ನೀ ಮುಟ್ಟುವ ಮರ ಶ್ರೀಗಂಧದ ಮರ, ನೀ ಕುಡಿಯುವ ನೀರ್ ಕಾವೇರಿ 
ಪಂಪನನೋದುವ ನಿನ್ನಾ ನಾಲಗೆ ಕನ್ನಡವೇ ಸತ್ಯ
ಕುಮಾರವ್ಯಾಸನ ಆಲಿಪ ಕಿವಿ ಅದು ಕನ್ನಡವೇ ನಿತ್ಯ
ಎಲ್ಲಾದರೂ ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು

ಹರಿಹರ ರಾಘವರಿಗೆ ಎರಗುವ ಮನ, ಹಾಳಾಗಿಹ ಹಂಪೆಗೆ ಕೊರಗುವ ಮನ
ಹರಿಹರ ರಾಘವರಿಗೆ ಎರಗುವ ಮನ, ಹಾಳಾಗಿಹ ಹಂಪೆಗೆ ಕೊರಗುವ ಮನ
ಪೆ೦ಪಿನ ಬನವಾಸಿಗೆ ಕರಗುವ ಮನ, ಬೆಳ್ಗೊಳ ಬೇಲೂರ್ಗಳ ನೆನೆಯುವ ಮನ
ಜೋಗದ ಜಲಪಾತದಿ ಧುಮುಕುವ ಮನ, ಮಲೆನಾಡಿಗೆ ಹೊಂಪುಳಿ ಹೋಗುವ ಮನ
ಕನ್ನಡವೇ ಸತ್ಯ ಕನ್ನಡವೇ ನಿತ್ಯ
ಎಲ್ಲಾದರೂ ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು

ಕಾಜಾಣಕೆ ಗಿಳಿ ಕೋಗಿಲೆ ಇಂಪಿಗೆ, ಮಲ್ಲಿಗೆ ಸಂಪಿಗೆ, ಕೇದಗೆ ಸೊಂಪಿಗೆ
ಮಾವಿನ ಹೊಂಗೆಯ ತಳಿರಿನ ತಂಪಿಗೆ,
ರಸರೊಮಾಂಚನಗೊಳುವ ತನುಮನ
ಎಲ್ಲಿದ್ದರೆ ಏನ್, ಎಂತಿದ್ದರೆ ಏನ್ 
ಎಂದೆಂದಿಗೂ ತಾನ್ ಕನ್ನಡವೇ ಸತ್ಯ, ಕನ್ನಡವೇ ನಿತ್ಯ, ಅನ್ಯವೆನಲದೆ ಮಿಥ್ಯ 
ಎಲ್ಲಾದರೂ ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು
ಕನ್ನಡವೇ ಸತ್ಯ, ಕನ್ನಡವೇ ನಿತ್ಯ
ಕನ್ನಡವೇ ಸತ್ಯ, ಕನ್ನಡವೇ ನಿತ್ಯ
ಕನ್ನಡವೇ ಸತ್ಯ, ಕನ್ನಡವೇ ನಿತ್ಯ

No comments:

Post a Comment